Description
ದರ್ಶನ್ ಜಯಣ್ಣ ಅವರು ತಮ್ಮ ಅಪ್ಪನ ಕುರಿತು ಕಾಳಜಿ, ಕಳಕಳಿಯಿಂದ ಬರೆದಿರುವ ಕೃತಿ
“ಅಪ್ಪ ಯಾವ ಸಂಶೋಧನೆಯ ವಿದ್ಯಾರ್ಥಿಯಾಗಿರದಿದ್ದರೂ ಕೂಡ, ಗಿಡಮೂಲಿಕೆಗಳ ಆಧಾರಗಳನ್ನು ಮತ್ತು ಅವುಗಳ ಉಪಯುಕ್ತತೆಗಳನ್ನು ಹಳೆಯ ಗ್ರಂಥಗಳಲ್ಲಿ ಹುಡುಕುತ್ತಿದ್ದ ಪರಿ ನನ್ನನ್ನು ಹಲವು ಬಾರಿ ಆಶ್ಚರ್ಯಚಕಿತನನ್ನಾಗಿ ಮಾಡಿದೆ. ಪುಟ್ಟ ಊರೊಂದರ ಗ್ರಂಥಿಗೆ ಅಂಗಡಿಯ ಅಪ್ಪ, ಕೆಲವೊಮ್ಮೆ ರಾತ್ರಿ ಎಲ್ಲಾ ಟೇಬಲ್ ಲ್ಯಾಂಪ್‌ನ ಅಡಿಯಲ್ಲಿ ಆಧಾರ ಹುಡುಕುತ್ತಿದ್ದು, ಬೆಳಿಗ್ಗೆ ಅದರ ಬಗ್ಗೆ ತನ್ನನ್ನು ಅರಸಿ ವಾತ, ಪಿತ್ತ, ಕಫ ಮುಂತಾದವುಗಳ ನಿವಾರಣೆಗೆ ಬಂದ ಹಳ್ಳಿಯವರಿಗೆ ಕುತೂಹಲದಿಂದ ಹೇಳುತ್ತಿದ್ದದ್ದು ಕಣ್ಣಿಗೆ ಕಟ್ಟಿದ ಹಾಗಿದೆ.
ಅಪ್ಪ ತನ್ನಂತೆಯೇ ಬದುಕಿ, ತನಗೇನು ಅನಿಸುವುದೋ ಅದನ್ನೇ ಮಾಡಿ, ಯಾರ ಮರ್ಜಿಗೂ ಮುಲಾಜಿಗೂ ಬೀಳದೆ, ಯಾರಿಗೂ ತಲೆಬಾಗದೆ, ಪೂಜಾ ಸಾಮಗ್ರಿ ಅಂಗಡಿ ಮತ್ತು ಮಠಗಳ ಊರಿನಲ್ಲಿ ಇದ್ದರೂ ಸ್ವಾಮಿಗಳ ಹಿಂದೆ ಬೀಳದೆ, ಐನೋರುಗಳಿಗೆ ಒಂದು ರೂಪಾಯಿಯೂ ಕಮಿಷನ್ ಕೊಡದೆ ತನ್ನಷ್ಟಕ್ಕೆ ತಾನು ಎಂಬಂತೆ ಇದ್ದುಬಿಟ್ಟ ಆಸಾಮಿ.
ಅಪ್ಪನಿಗೆ ಪ್ರಾಣಿ, ಪಕ್ಷಿ, ಪಶು, ಕೀಟ, ಕಾಡು, ಮೂಲಿಕೆ, ಮರ ಗಿಡ, ತೊರೆ ಹಳ್ಳ, ಬುಡಕಟ್ಟು ಬವಣೆ, ಭಾಷೆ ಇವೆಲ್ಲದರ ಬಗ್ಗೆ ಮಗುವಿನ ಬೆರಗು ಹಾಗು ಸಂಶೋಧಕನ ಕುತೂಹಲವಿತ್ತು. ಇದು ಅವರ ಮಾತಿನಲ್ಲಿ ಪ್ರತಿನಿತ್ಯ ಅನಾವರಣಗೊಳ್ಳುತ್ತಿತ್ತು.
ಇದರ ಜೊತೆ ಜೊತೆಗೆ ತನ್ನ ಆರೋಗ್ಯದ ಕಡೆಗೆ ಸರಿಯಾಗಿ ಗಮನ ಕೊಡದೆ ತಿನ್ನುವಾಗ ತಿನ್ನದೆ, ತೊಡುವಾಗ ತೊಡದೆ, ವಿಲಾಸಿಯಾಗದೆ, ಹೆಂಡತಿ ಮಕ್ಕಳ ಕಾಳಜಿಗೆ ಎಂದೂ ಕಿವಿಗೊಡದೆ ಬದುಕಿದ ಸೀದಾ ಸಾದಾ ಮನುಷ್ಯ. He was a complex character!”
Reviews
There are no reviews yet.