ಮಾಕೋನ ಏಕಾಂತ

130.00

Add to Wishlist
Add to Wishlist
Email

Description

2021 ನೇ ಸಾಲಿನ ಛಂದ ಪುಸ್ತಕ ಬಹುಮಾನ ವಿಜೇತ ಕೃತಿ

ವಿಭಿನ್ನ ಸಾಂಸ್ಕೃತಿಕ ಆವರಣಗಳಲ್ಲಿ ಅರಳಿರುವ ಕಾವ್ಯಾ ಕಡಮೆ ಅವರ ಕತೆಗಳು ಅನುಭವದ ತಾಜಾತನದಿಂದ, ಲವಲವಿಕೆಯ ನಿರೂಪಣೆಯಿಂದ, ಪ್ರಬುದ್ಧ ನಿರ್ವಹಣೆಯಿಂದ ಮನಮುಟ್ಟುತ್ತವೆ. ತೀರ್ಪು ಕೊಡುವ ಆತುರಕ್ಕೆ ಬೀಳದೆ ಮನುಷ್ಯ ಸ್ವಭಾವ ಮತ್ತು ಸಂಬಂಧಗಳ ಹಲವು ಆಯಾಮಗಳನ್ನು ಮುಕ್ತವಾಗಿ, ಸೂಕ್ಷ್ಮವಾಗಿ ಪರಿಶೀಲಿಸಿಕೊಳ್ಳುವ ವ್ಯವಧಾನ, ಉದಾರತೆ ಇಲ್ಲಿ ಕಾಣುತ್ತವೆ. ಜೀವನ ವೈಶಾಲ್ಯ-ವೈವಿಧ್ಯಗಳ ಬಗ್ಗೆ ಲೇಖಕಿ ಉಳಿಸಿಕೊಂಡಿರುವ ಬೆರಗು ಈ ಕತೆಗಳ ಸ್ಥಾಯೀಭಾವವಾಗಿದೆ. ಸಿದ್ಧಜಾಡನ್ನು ಬಿಟ್ಟು ಹೊಸ ಹೊಸ ಲೋಕಗಳನ್ನು ಅನ್ವೇಷಿಸುವ ದಿಟ್ಟತನ, ಕಾವ್ಯಕ್ಕೆ ಸಮೀಪವೆನ್ನಿಸುವಂಥ ಭಾಷಾ ಬಳಕೆ, ಕತೆಗಿಂತ ಕಥನಕ್ಕೆ ನೀಡಿರುವ ಪ್ರಾಮುಖ್ಯತೆಗಳಿಂದಾಗಿ ಈ ಬರಹಗಳು ವಿಶಿಷ್ಟವಾಗಿವೆ. ಕನ್ನಡೇತರ ಪರಿಸರಗಳಲ್ಲಿ ಸೃಷ್ಟಿಯಾಗುವ ಅನುಭವಗಳನ್ನು ಕನ್ನಡ ಭಾಷೆಯಲ್ಲಿ ಗ್ರಹಿಸಿ-ಅಭಿವ್ಯಕ್ತಿಸುವ ಮೂಲಕ ಕನ್ನಡ ಓದುಗರ ಭಾವಲೋಕಗಳನ್ನು ಹಿಗ್ಗಿಸುವಲ್ಲಿ ಲೇಖಕಿ ಸಾಕಷ್ಟು ಯಶಸ್ವಿಯಾಗಿದ್ದಾರೆ. ಈ ಕತೆಗಳನ್ನು ಓದುತ್ತಿದ್ದಂತೆ ಹೊಸದೇನನ್ನೋ ಅನುಸಂಧಾನ ಮಾಡುತ್ತಿರುವ ಅನುಭವವಾಗುತ್ತದೆ.

– ಟಿ.ಪಿ. ಅಶೋಕ, ಹಿರಿಯ ವಿಮರ್ಶಕರು

Reviews

There are no reviews yet.

Be the first to review “ಮಾಕೋನ ಏಕಾಂತ”

Your email address will not be published.