Description
ನಿರೂಪಣೆಯಾಚೆಗೆ (ಜನಪದ ಸಾಹಿತ್ಯ ಮತ್ತು ಮಹಿಳೆ) ಹಂಪಿ ಕನ್ನಡ ವಿಶ್ವವಿದ್ಯಾಲಯದ ಮಹಿಳಾ ಅಧ್ಯಯನ ವಿಭಾಗದ ಪ್ರಾಧ್ಯಾಪಕರು, ಪ್ರಸಾರಾಂಗದ ನಿರ್ದೇಶಕರಾದ ಡಾ.ಶೈಲಜಾ ಇಂ.ಹಿರೇಮಠ ಅವರ ಹೊಸ ಕೃತಿ. ‘ಸಂಗಾತ ಪುಸ್ತಕ’ ಈ ಕೃತಿಯನ್ನು ಪ್ರಕಟಿಸಿದೆ.
ವಿಶಾಲಾರ್ಥದಲ್ಲಿ ಬರಹಗಾರರಾಗುವುದೆಂದರೆ, ಸಮಾಜದಲ್ಲಿನ ಜಾತಿ, ಪ್ರದೇಶ, ಬುಡಕಟ್ಟು, ಆದಿವಾಸಿ ಮತ್ತು ಜಂಡರ್ ಆಧಾರಿತ ಶ್ರೇಣೀಕರಣವನ್ನು ಮೀರುವುದೇ ಆಗಿದೆ; ಹಾಗಿದ್ದರೂ ಅಸಮಾನತೆಗೆ ಬುನಾದಿಯೊದಗಿಸುವ ಶ್ರೇಣೀಕರಣವನ್ನು ಅಸ್ಮಿತೆಯಾಗಿ, ಅನನ್ಯತೆಯಾಗಿ ಚಿಂತಕರು ನಿರೂಪಿಸಿದ್ದರ ಪರಿಣಾಮದಿಂದಾಗಿ, ಅಸಮಾನತೆಯನ್ನು ಸಮರ್ಥಿಸುವ ನಿರೂಪಣೆಗಳು ಸಾಹಿತ್ಯ ಲೋಕದಲ್ಲೂ ನಿರಾತಂಕವಾಗಿ ಮುಂದುವರೆದಿವೆ. ಬರಹಲೋಕದೊಳಗಿನ ಇಂತಹ ನಿರೂಪಣೆಯ ರಾಜಕಾರಣವೇ ಸತ್ಯವನ್ನು ಸೃಷ್ಟಿಸುತ್ತ, ಅದನ್ನು ಒಪ್ಪುವಂತೆ ಜ್ಞಾನದ ಅಧಿಕಾರದ ನೆಲೆಯಲ್ಲಿ ಒತ್ತಾಯಿಸುತ್ತದೆ; ಅಧ್ಯಯನದೊಳಗಿನ ಬರಹಗಾರರ ಉದ್ದೇಶದ ಭಾಗವಾಗಿ ನಿರೂಪಣೆಗೊಂಡ ನಿಲುವುಗಳನ್ನು ಸಮಸ್ಯೀಕರಿಸಿಕೊಂಡು ಮರುವಿಶ್ಲೇಷಣೆಗೆ ಒಳಪಡಿಸಬೇಕಿದೆ.
ಈ ಉದ್ದೇಶದ ಹಿನ್ನೆಲೆಯಲ್ಲಿಯೇ ಮಹಿಳೆಯನ್ನು ಕೇಂದ್ರವಾಗಿಟ್ಟುಕೊಂಡು ನಡೆದ ಜನಪದ ಸಾಹಿತ್ಯದೊಳಗಿರುವ ರಾಜಕಾರಣವನ್ನು ಅಕ್ಯಾಡೆಮಿಕ್ ವಲಯದಿಂದ ಬಿಡಿಸಿಕೊಂಡು ಜನ ಸಮುದಾಯದ ವಲಯದಲ್ಲಿಟ್ಟು ಶೋಧಿಸುತ್ತಾ, `ವಾಸ್ತವ’ವನ್ನು ಕಟ್ಟುವ ಪ್ರಯತ್ನವನ್ನು ಪ್ರಸ್ತುತ ಕೃತಿಯಲ್ಲಿ ಮಾಡಲಾಗಿದೆ.
Reviews
There are no reviews yet.